ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಸಮಾಧಾನ ಮಹೋತ್ಸವಕ್ಕೆ ವಿರೋಧ – ಹಿಂದೂ ಜಾಗರಣ ವೇದಿಕೆಯ 38 ಮಂದಿ ವಿರುದ್ಧ ಪ್ರಕರಣ ದಾಖಲು

ಉಡುಪಿ : ನಗರದಲ್ಲಿ ನಡೆಯುತ್ತಿರುವ “ಸಮಾಧಾನ ಮಹೋತ್ಸವ” ಕಾರ್ಯಕ್ರಮ ವೇಳೆ ಪ್ರತಿಭಟನೆ ನಡೆಸಿದ 38 ಮಂದಿ ಹಿಂಜಾವೇ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ ನಗರದ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಫೆಲೋಶಿಪ್ ಆಫ್ ಉಡುಪಿ ಡಿಸ್ಟ್ರಿಕ್ಟ್ ಚರ್ಚ್ ವತಿಯಿಂದ ಮಾರ್ಚ್ 20ರಿಂದ 22ರವರೆಗೆ “ಸಮಾಧಾನ ಮಹೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕ್ರಿಶ್ಚಿಯನ್ ಭಾಷಣಕಾರ ಮೋಹನ್ ಸಿ. ಲಾಜರಸ್ ಅವರನ್ನು ಆಹ್ವಾನಿಸಲಾಗಿತ್ತು.

ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ, ಆಯೋಜಕರು ಕರ್ನಾಟಕ ಹೈಕೋರ್ಟ್‌ನಿಂದ ರಕ್ಷಣೆ ಕೋರಿ ಆದೇಶ ಪಡೆದುಕೊಂಡಿದ್ದರು. ಅದರಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಬಂದೋಬಸ್ತ್ ಏರ್ಪಡಿಸಿತ್ತು.

ಮಾರ್ಚ್ 20ರಂದು ಸಂಜೆ ಸುಮಾರು 5 ಗಂಟೆಗೆ, ಹಿಂದೂ ಜಾಗರಣ ವೇದಿಕೆಯ ಶ್ರೀಕಾಂತ ಶೆಟ್ಟಿ ನೇತೃತ್ವದಲ್ಲಿ ಸುಮಾರು 38 ಮಂದಿ ಪ್ರತಿಭಟನಾಕಾರರು ಗೋವಿಂದ ಕಲ್ಯಾಣಮಂಟಪದಿಂದ ಕಾರ್ಯಕ್ರಮ ನಡೆಯುವ ಸ್ಥಳದತ್ತ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಲು ಯತ್ನಿಸಿದರು. ಕಾರ್ಯಕ್ರಮದಲ್ಲಿ ಮತಾಂತರ ನಡೆಯುವ ಸಾಧ್ಯತೆ ಇದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಧಾವಿಸಿದ ಪೊಲೀಸರು, ಹೈಕೋರ್ಟ್ ಆದೇಶದ ಪ್ರಕಾರ ಕಾರ್ಯಕ್ರಮಕ್ಕೆ ಅಡ್ಡಿಪಡಿಸದಂತೆ ಎಚ್ಚರಿಕೆ ನೀಡಿದರು. ಆದರೂ ಪ್ರತಿಭಟನಾಕಾರರು ಮುಂದುವರಿಯಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ, ಪೊಲೀಸರು ಅಕ್ರಮ ಕೂಟ ಹಾಗೂ ಶಾಂತಿ ಭಂಗ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲರನ್ನು ವಶಕ್ಕೆ ಪಡೆದು ಬಂಧಿಸಿದರು.

ಬಂಧಿತರಲ್ಲಿ ಮಹೇಶ್ ಶೆಣೈ, ಶ್ರೀಕಾಂತ ಶೆಟ್ಟಿ, ಸಂತೋಷ್, ಉಮೇಶ್ ನಾಯ್ಕ್ ಸೇರಿದಂತೆ ಒಟ್ಟು 38 ಮಂದಿ ಸೇರಿದ್ದು ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 44/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 189(2) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 112ರಡಿ ಪ್ರಕರಣ ದಾಖಲಾಗಿದೆ.

Edited By :
PublicNext

PublicNext

21/03/2026 12:54 pm

Cinque Terre

5.03 K

Cinque Terre

0

ಸಂಬಂಧಿತ ಸುದ್ದಿ