ಚಾಮರಾಜನಗರ : ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾದ್ಯಂತ ಮುಸ್ಲಿಂ ಸಮುದಾಯವು ಸಂಭ್ರಮ, ಸಡಗರ ಹಾಗೂ ಶ್ರದ್ಧಾ ಭಕ್ತಿಯಿಂದ ಈದ್ ಉಲ್ ಫಿತರ್ ಆಚರಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಜಿಲ್ಲಾಕೇಂದ್ರದ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಕಳೆದ 30 ದಿನಗಳಿಂದ ನಡೆಸುತ್ತಿದ್ದ ಉಪವಾಸವನ್ನು ಕೊನೆಗೊಳಿಸಿದರು.
30 ದಿನಗಳ ಉಪವಾಸದ ಬಳಿಕ ನಿನ್ನೆ ಚಂದ್ರನ ದರ್ಶನ ಪಡೆದ ಮುಸ್ಲಿಂ ಸಮುದಾಯದವರು, ಇಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಹಬ್ಬದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಮಕ್ಕಳು, ಸ್ನೇಹಿತರು ಮತ್ತು ಸಂಬಂಧಿಗಳ ಜೊತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಶುಭಾಶಯ ಕೋರಿದರು. ಬಳಿಕ, ಮುಸ್ಲಿಂ ಧರ್ಮಗುರುಗಳಿಗೆ ಸನ್ಮಾನಿಸಿ ಶುಭಾಶಯ ಕೋರಿದರು.
PublicNext
21/03/2026 01:04 pm
LOADING...