ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ ಅವರ ಹೆಸರು ಮತ್ತು ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡು ವಾಟ್ಸ್ಆ್ಯಪ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿರುವ ವಂಚಕರ ಜಾಲವೊಂದು ಸಕ್ರಿಯವಾಗಿದೆ. ವಂಚಕರು, ಜಿಲ್ಲಾಧಿಕಾರಿ ಹೆಸರಿನಲ್ಲಿ 'ನನ್ನ ಬ್ಯಾಂಕ್ ಖಾತೆ ನಿಷ್ಕ್ರಿಯವಾಗಿದೆ, ತುರ್ತು ಹಣದ ಅವಶ್ಯಕತೆ ಇದೆ' ಎಂಬ ಸಂದೇಶಗಳನ್ನು ಕಳುಹಿಸಿ ಜನರನ್ನು ಯಾಮಾರಿಸಲು ಯತ್ನಿಸುತ್ತಿದ್ದಾರೆ.
ವಂಚಕರ ಕಾರ್ಯವೈಖರಿ
ಇದೇ ರೀತಿ, ವಂಚಕರು ವಸತಿ ಶಾಲೆಯ ಪ್ರಾಂಶುಪಾಲರಾದ ಲೀಲಾ ಅವರಿಗೆ ವಾಟ್ಸ್ಆ್ಯಪ್ ಸಂದೇಶ ಕಳುಹಿಸಿ 50 ಸಾವಿರ ರೂಪಾಯಿಗಳನ್ನು ವರ್ಗಾಯಿಸುವಂತೆ ಕೇಳಿದ್ದಾರೆ. ಹಣವನ್ನು 'ಬ್ಯಾಂಕ್ ಆಫ್ ಮಹಾರಾಷ್ಟ್ರ'ದಲ್ಲಿ ರೋಹಿತ್ ಕುಮಾರ್ ಎಂಬ ಹೆಸರಿನ ಖಾತೆಗೆ ವರ್ಗಾಯಿಸುವಂತೆ ಸೂಚಿಸಿದ್ದು, ನಂತರ ಹಣವನ್ನು ಹಿಂತಿರುಗಿಸುವ ಭರವಸೆಯನ್ನೂ ನೀಡಿದ್ದಾರೆ.
ಜಿಲ್ಲಾಧಿಕಾರಿ ಎಚ್ಚರಿಕೆ ಮತ್ತು ಪೊಲೀಸರ ತನಿಖೆ
ಈ ಘಟನೆ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ ಅವರ ಗಮನಕ್ಕೆ ಬರುತ್ತಿದ್ದಂತೆಯೇ, ಅವರು ತಕ್ಷಣವೇ ಎಚ್ಚೆತ್ತುಕೊಂಡು ವಿಶ್ವನಾಥಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಪೊಲೀಸರಿಂದ ತನಿಖೆ ತೀವ್ರಗೊಂಡಿದ್ದು, ವಂಚಕರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.
Kshetra Samachara
21/03/2026 02:40 pm
LOADING...