ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 'ಸಮಾಧಾನ ಮಹೋತ್ಸವ' ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರಿಂದ ಧರಣಿ - ಹಲವರು ವಶಕ್ಕೆ, ಬಳಿಕ ಬಿಡುಗಡೆ

ಉಡುಪಿ: ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಮೂರು ದಿನ ಕಾಲ ಆಯೋಜಿಸಿರುವ 'ಸಮಾಧಾನ ಮಹೋತ್ಸವ' ಕಾರ್ಯಕ್ರಮವನ್ನು ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ಪ್ರತಿಭಟನೆ ನಡೆಸಿದರು.

ಮೊದಲು ಗೋವಿಂದ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಕಾರ್ಯಕರ್ತರು ಬಳಿಕ ಸಮಾಧಾನ ಮಹೋತ್ಸವ ನಡೆಯುವ ಮಿಷನ್ ಕಾಂಪೌಂಡ್ ಮೈದಾನದ ಕಡೆಗೆ ತೆರಳಲು ಯತ್ನಿಸಿದರು. ಆದರೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಬಳಿಕ ಮಣಿಪಾಲ ಠಾಣೆಗೆ ಕರೆದೊಯ್ದು ಬಿಡುಗಡೆ ಮಾಡಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಉಡುಪಿ ನಗರ ಠಾಣೆಯ ಪ್ರಭಾರ ಇನ್ಸ್‌ಪೆಕ್ಟ‌ರ್ ಮಹೇಶ್‌ ಪ್ರಸಾದ್ ನೇತೃತ್ವದಲ್ಲಿ ಭದ್ರತೆಯನ್ನು ಕೈಗೊಳ್ಳಲಾಗಿತ್ತು.

Edited By :
PublicNext

PublicNext

21/03/2026 02:48 pm

Cinque Terre

7.73 K

Cinque Terre

0