ಬಳ್ಳಾರಿ : ಪವಿತ್ರ ರಂಜಾನ್ ಹಬ್ಬದ ನಿಮಿತ್ತ ಗಣಿನಾಡು ಬಳ್ಳಾರಿಯ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಶಾಂತಿ ಮತ್ತು ಸಮೃದ್ಧಿಗಾಗಿ ಸಮುದಾಯದ ಮುಖಂಡರ ಜೊತೆಗೂಡಿ ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಭರತ್ ರೆಡ್ಡಿ ಹಾಗೂ ಸಂಸದ ತುಕಾರಾಂ ಭಾಗವಹಿಸಿ, ಮುಸ್ಲಿಂ ಸಮುದಾಯದವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಧರ್ಮ ಸೌಹಾರ್ದತೆ ಹಾಗೂ ಸಹಬಾಳ್ವೆ ಸಂದೇಶವನ್ನು ಈ ಹಬ್ಬ ಸಾರುತ್ತದೆ ಎಂದರು. ಯುಗಾದಿ ಮತ್ತು ರಂಜಾನ್ ಒಟ್ಟಾಗಿ ಬಂದಿರುವುದು ಸಂತಸದ ವಿಷಯವಾಗಿದ್ದು ಎಲ್ಲರೂ ಹೊಸ ವರ್ಷದಲ್ಲಿ ಸಂಭ್ರಮ ಸಡಗರದಿಂದ ಇರೋಣ ಎನ್ನುವ ಸಂದೇಶ ನೀಡಿದರು.ಪ್ರಾರ್ಥನೆ ನಂತರ ಪರಸ್ಪರ ಆಲಿಂಗನ ಮಾಡುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು.
PublicNext
21/03/2026 04:12 pm
LOADING...