ಶಿವಮೊಗ್ಗ : ಬಾಕ್ಸಿಂಗ್ ಕ್ರೀಡೆ ಅಂತರಾಷ್ಟ್ರೀಯ ಪ್ರಾಮುಖ್ಯತೆ ಪಡೆದ ಕ್ರೀಡೆಯಾಗಿದ್ದು, ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿ ನಡೆಯುತ್ತಿರುವುದು ಹರ್ಷದಾಯಕ ವಿಚಾರವಾಗಿದ್ದು, ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸಿ ಹೆಚ್ಚಿನ ಸಾಧನೆ ಮಾಡಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿತರಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಬಾಕ್ಸಿಂಗ್ ಅಮೆಚೂರ್ ಅಸೋಸಿಯೇಷನ್ ಜಿಲ್ಲಾ ಶಾಖೆಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಯೂತ್ ಮತ್ತು ಜೂನಿಯರ್ ಬಾಕ್ಸಿಂಗ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಬಾಕ್ಸಿಂಗ್ ಜೊತೆಗೆ ವಿದ್ಯೆಯನ್ನು ಮರೆಯಬೇಡಿ. ಬಾಕ್ಸಿಂಗ್‌ನಲ್ಲಿ ಎಕ್ಸ್‌ಪರ್ಟ್ ಆದಲ್ಲಿ ಉತ್ತಮ ಭವಿಷ್ಯವಿದೆ. ಅದರ ಜೊತೆಗೆ ವಿದ್ಯೆಗೂ ಮಹತ್ವ ನೀಡಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಲಿಂಪಿಕ್‌ನಲ್ಲಿ ಬಾಕ್ಸಿಂಗ್‌ಗೆ ಅಗ್ರಸ್ಥಾನವಿದೆ. ಭಾಗವಹಿಸಿದ ಎಲ್ಲರಿಗೂ ಯಶಸ್ಸು ಸಿಗಲಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಅವಕಾಶ ಸಿಗಲಿ ಎಂದರು.
PublicNext
21/03/2026 05:23 pm
LOADING...