ಮೂಡಿಗೆರೆ: ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನವೀಯ ಹಲ್ಲೆ ನಡೆಸಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳು ಆಟವಾಡುತ್ತಿದ್ದರು ಎಂಬ ಕ್ಷುಲ್ಲಕ ಕಾರಣಕ್ಕಾಗಿ ಉತ್ತರ ಭಾರತ ಮೂಲದ ಪ್ರಾಚಾರ್ಯರು ವಿದ್ಯಾರ್ಥಿಗಳನ್ನು ಅಂಡರ್ ಗ್ರೌಂಡ್ ಕೊಠಡಿಯಲ್ಲಿ ಕೂಡಿ ಹಾಕಿ, ಅವರಿಗೆ ಆಹಾರ ನೀಡದೆ ಉಪವಾಸವಿರಿಸಿ ಮನಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಕೊಠಡಿಯ ಒಳಗಿನಿಂದ ಕೇಳಿಬಂದ ಮಕ್ಕಳ ಕೂಗಾಟವನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಬಣಕಲ್ ಪೊಲೀಸರು ಪರಿಶೀಲನೆ ನಡೆಸಿದಾಗ ಅಂಡರ್ ಗ್ರೌಂಡ್ ರೂಮಿನಲ್ಲಿ ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ. ಮೈಮೇಲೆ ಬಾಸುಂಡೆಗಳಿರುವ ಮಕ್ಕಳನ್ನು ಪೊಲೀಸರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಚಾರ್ಯರ ಈ ಕೃತ್ಯದ ವಿರುದ್ಧ ಪೊಲೀಸರು ಹಾಗೂ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
PublicNext
21/03/2026 05:28 pm
LOADING...