ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದಲ್ಲಿ ರಂಜಾನ್ ಸಂಭ್ರಮ

ಶಿವಮೊಗ್ಗ : ಜಿಲ್ಲೆಯಾದ್ಯಂತ ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಗರದ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಹಬ್ಬದ ಆಚರಣೆಯಲ್ಲಿ ತೊಡಗಿದ್ದು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಸೌಹಾರ್ದತೆ ಮೆರೆದರು.

ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಜನದಟ್ಟಣೆ ಕಂಡುಬಂದಿದ್ದು, ಅಲ್ಲಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಸಾರ್ವಜನಿಕರ ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಪೊಲೀಸ್ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಿತ್ತು.

ಈದ್ಗಾ ಮೈದಾನ ಹಾಗೂ ಇತರೆ ಪ್ರಾರ್ಥನಾ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ರಂಜಾನ್ ಹಬ್ಬವನ್ನ ಆಚರಣೆ ಮಾಡಿದರು.

ನಗರದ ಡಿಸಿ ಕಚೇರಿ ಮುಂಭಾಗದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಹಬ್ಬದ ಶುಭಾಶಯ ಕೋರಿದರು.

Edited By :
PublicNext

PublicNext

21/03/2026 05:47 pm

Cinque Terre

6.64 K

Cinque Terre

0

ಸಂಬಂಧಿತ ಸುದ್ದಿ