ಕಾಸರಗೋಡು:ಕೇರಳ ವಿಧಾನಸಭೆ ಚುನಾವಣಾ ರಂಗ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಮಂಜೇಶ್ವರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ.
ನೂರಾರು ಕಾರ್ಯಕರ್ತರೊಂದಿಗೆ ಭರ್ಜರಿ ಮೆರವಣಿಗೆ ನಡೆಸಿ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ಉಪ್ಪಳ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ಸುರೇಂದ್ರನ್, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುರೇಂದ್ರನ್ ಅವರಿಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಸೇರಿದಂತೆ ಪಕ್ಷದ ಹಲವು ಮುಖಂಡರು ಸಾಥ್ ನೀಡಿದರು.
ಈ ವೇಳೆ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ತಮ್ಮ ನಾಯಕನಿಗೆ ಬೆಂಬಲ ಸೂಚಿಸಿದರು.
ಒಟ್ಟಾರೆ ಮಂಜೇಶ್ವರ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದ್ದು, ರಾಜಕೀಯ ಪೈಪೋಟಿ ತೀವ್ರಗೊಂಡಿದೆ.
PublicNext
21/03/2026 06:07 pm
LOADING...