ಬೆಂಗಳೂರು: ಮೈಸೂರು ರಸ್ತೆ ಗಾಳಿ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ವರ್ಷದ ಜಾತ್ರಾ ಆಚರಣೆಗಳಲ್ಲಿ ಪಾಲ್ಗೊಳ್ಳಲು ದೇವಸ್ಥಾನದ ಟ್ರಸ್ಟ್ ಸದಸ್ಯರಿಗೆ ಹೈಕೋರ್ಟ್ ಅನುಮತಿ ನೀಡಿದೆ. ಮಾರ್ಚ್ 23 ರಿಂದ ಏಪ್ರಿಲ್ 4ರ ವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವದಲ್ಲಿ ಟ್ರಸ್ಟಿಗಳು ಭಾಗವಹಿಸಲು ಉಚ್ಚ ನ್ಯಾಯಾಲಯ ಅನುಮೋದನೆ ನೀಡಿದೆ.
ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದ ನಂತರ ನಡೆಯುತ್ತಿರುವ ಮೊದಲ ಜಾತ್ರೆ ಇದಾಗಿದ್ದು, ವಿಶೇಷ ಮಹತ್ವ ಪಡೆದುಕೊಂಡಿದೆ. ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಜಾತ್ರಾ ಮಹೋತ್ಸವಕ್ಕೆ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ.
ಜಾತ್ರೆಯ ಸುಗಮ ಆಚರಣೆಗಾಗಿ ದೇವಸ್ಥಾನದ ಟ್ರಸ್ಟಿಗಳು ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳ ನಡುವೆ ಮಹತ್ವದ ಸಭೆ ನಡೆದಿದೆ. ಜಾತ್ರೆಯನ್ನು ಯಾವ ರೀತಿ ನಡೆಸಬೇಕು, ಭಕ್ತರಿಗೆ ಅಗತ್ಯ ವ್ಯವಸ್ಥೆಗಳನ್ನು ಹೇಗೆ ಕಲ್ಪಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ದೇವಸ್ಥಾನದ ಆಗಮಿಕರು ಜಾತ್ರಾ ಪೂಜಾ ವಿಧಿವಿಧಾನಗಳ ಕುರಿತು ಮಾಹಿತಿ ನೀಡಿದ್ದಾರೆ.
ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ರಾಮನವಮಿಯ ದಿನದಂದು ಬ್ರಹ್ಮ ರಥೋತ್ಸವ ಜರುಗಲಿದ್ದು, ಅಪಾರ ಭಕ್ತರು ಈ ಐತಿಹಾಸಿಕ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
PublicNext
21/03/2026 07:00 pm
LOADING...