ತುಮಕೂರು: ಏಪ್ರಿಲ್ 1 ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ಶಿವೈಕ್ಯ ಶಿವಕುಮಾರ ಶ್ರೀಗಳ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿಗಳು ಮಾರ್ಚ್ 31ರಂದು ಸಂಜೆ ಬೆಂಗಳೂರಿಗೆ ಆಗಮಿಸಿ, ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮಾರನೇ ದಿನ, ಏಪ್ರಿಲ್ 1ರಂದು ಬೆಳಗ್ಗೆ ರಾಷ್ಟ್ರಪತಿಗಳು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಶಿವೈಕ್ಯ ಶ್ರೀಗಳ ಗದ್ದಿಗೆಗೆ ದರ್ಶನ ಪಡೆದು, ನಂತರ ಜನ್ಮ ದಿನೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿಗಳು ಸುಮಾರು ಒಂದೂವರೆ ಗಂಟೆಗಳ ಕಾಲ ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಈ ಕುರಿತು ಸಿದ್ದಗಂಗಾ ಮಠದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.
PublicNext
21/03/2026 07:27 pm
LOADING...