ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜಲಮಂಡಳಿಯಿಂದ ಯುಗಾದಿ ಬಂಪರ್ ಗಿಫ್ಟ್ - ನೀರಿನ ಬಿಲ್ ಬಡ್ಡಿ ಕಂಪ್ಲೀಟ್ ಫ್ರೀ!

ಬೆಂಗಳೂರು: ಬೆಂಗಳೂರು ನಾಗರಿಕರಿಗೆ ಯುಗಾದಿ ಹಬ್ಬದ ಉಡುಗೊರೆಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಲಮಂಡಳಿಯ ಒನ್‌ ಟೈಮ್‌ ಸೆಟಲ್‌ಮೆಂಟ್‌ (OTS) ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯು ಏಪ್ರಿಲ್ 2026 ರಿಂದ ಜೂನ್ 2026 ರವರೆಗೆ ಮೂರು ತಿಂಗಳ ಕಾಲ ಜಾರಿಯಲ್ಲಿರಲಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ತಮ್ಮ ಬಿಲ್‌ನ ಅಸಲು ಮೊತ್ತವನ್ನು ಪಾವತಿಸಿದರೆ ಶೇ. 100 ರಷ್ಟು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯಲ್ಲಿರುವ ಸುಮಾರು 5.11 ಲಕ್ಷ ಗ್ರಾಹಕರು ಒಟ್ಟು 851.33 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ಇದರಲ್ಲಿ 311.90 ಕೋಟಿ ರೂ. ಬಡ್ಡಿ ಮೊತ್ತ ಸೇರಿದೆ. ಗೃಹ, ವಾಣಿಜ್ಯ ಮತ್ತು ಕೈಗಾರಿಕಾ ಸೇರಿದಂತೆ ಎಲ್ಲಾ ವರ್ಗದ ಗ್ರಾಹಕರಿಗೂ ಈ ಸೌಲಭ್ಯ ಅನ್ವಯವಾಗಲಿದ್ದು, ಗ್ರಾಹಕರು BWSSB ಕಿಯೋಸ್ಕ್ ಅಥವಾ ಆನ್‌ಲೈನ್ ಮೂಲಕ ಸುಲಭವಾಗಿ ಪಾವತಿ ಮಾಡಬಹುದಾಗಿದೆ.

ಸಾರ್ವಜನಿಕರು ಈ ಸುವರ್ಣಾವಕಾಶವನ್ನು ಬಳಸಿಕೊಂಡು ತಮ್ಮ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಬೇಕೆಂದು ಸರ್ಕಾರ ಮನವಿ ಮಾಡಿದೆ.

Edited By : Vijay Kumar
PublicNext

PublicNext

21/03/2026 08:16 pm

Cinque Terre

5.01 K

Cinque Terre

0

ಸಂಬಂಧಿತ ಸುದ್ದಿ