ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದಿರೆ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಡುಮಾರ್ನಾಡಿನ ಯುವಕ ಸಾತ್ವಿಕ್ ಮೃತ್ಯು

ಮೂಡಬಿದಿರೆ: ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಕಾರ್ಕಳದಲ್ಲಿ ಸಂಭವಿಸಿದ್ದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಾತ್ವಿಕ್ ಕುಲಾಲ್ (21) ಅವರು ಚಿಕಿತ್ಸೆ ಫಲಿಸದೆ ಇಂದು ವಿಧಿವಶರಾದರು.

ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್ ಅಂಚನ್ ಹಾಗೂ ಜಯಂತಿ ಕುಲಾಲ್ ಅವರ ಪುತ್ರರಾಗಿರುವ ಸಾತ್ವಿಕ್, ಸಿವಿಲ್ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು. ಅಪಘಾತದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Edited By : Vijay Kumar
Kshetra Samachara

Kshetra Samachara

21/03/2026 08:21 pm

Cinque Terre

1.26 K

Cinque Terre

0

ಸಂಬಂಧಿತ ಸುದ್ದಿ