ಮೂಡಿಗೆರೆ: ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಅಮಾನುಷ ಹಲ್ಲೆ ಖಂಡಿಸಿ ಪೋಷಕರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಶಾಲೆಯ ಮುಂಭಾಗದಲ್ಲಿ ಜಮಾಯಿಸಿದ್ದ ಸ್ಥಳೀಯರು ಹಾಗೂ ಪೋಷಕರು ಪ್ರಾಚಾರ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಅವರನ್ನು ಸೇವೆಯಿಂದ ವಜಾಗೊಳಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಕ್ಕಳನ್ನು ಅಂಡರ್‌ಗ್ರೌಂಡ್ ರೂಮಿನಲ್ಲಿ ಕೂಡಿ ಹಾಕಿ ಉಪವಾಸದ ಶಿಕ್ಷೆ ನೀಡಿರುವುದು ಕ್ರೂರತ್ವದ ಪರಮಾವಧಿ ಎಂದು ಕಿಡಿಕಾರಿರುವ ಪೋಷಕರು, ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿಯನ್ನು ಕಂಡು ಪೋಷಕರು ಕಣ್ಣೀರಿಟ್ಟಿದ್ದಾರೆ. ಸ್ಥಳಕ್ಕೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದರು.
PublicNext
21/03/2026 08:22 pm
LOADING...