ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಅಡಿಕೆ ತೋಟಕ್ಕೆ ನೀರುಣಿಸಲು ಹೋದ ಯುವಕನ ದುರಂತ ಅಂತ್ಯ - ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು : ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಅಡಿಕೆ ತೋಟಕ್ಕೆ ನೀರು ಹರಿಸಲು ಹೋದ ಯುವಕನೊಬ್ಬ ವಿದ್ಯುತ್ ಸ್ಪರ್ಶದಿಂದ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು 25 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ.

ಬೇಸಿಗೆಯ ಹಿನ್ನೆಲೆಯಲ್ಲಿ ಅಡಿಕೆ ತೋಟಕ್ಕೆ ನೀರುಣಿಸಲು ಹೋದ ಪ್ರವೀಣ್, ಬೋರ್‌ವೆಲ್ ಮೋಟಾರ್ ಆನ್ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ತೋಟಕ್ಕೆ ಹೋದ ಮಗ ಮರಳಿ ಬಾರದಿದ್ದನ್ನು ಕಂಡು ಕುಟುಂಬಸ್ಥರು ಹೋಗಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಮಗ ಅಕಾಲಿಕವಾಗಿ ಸಾವನ್ನಪ್ಪಿರುವುದು ಕುಟುಂಬದಲ್ಲಿ ಶೋಕದ ಛಾಯೆ ಆವರಿಸಿದ್ದು.

ಈ ಕುರಿತು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ

Edited By : PublicNext Desk
PublicNext

PublicNext

21/03/2026 08:25 pm

Cinque Terre

4.56 K

Cinque Terre

0

ಸಂಬಂಧಿತ ಸುದ್ದಿ