ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ತಗ್ಗು, ಗುಂಡಿಗಳ ಕಾಟ - ಗುದ್ದಲಿ ಪೂಜೆಗೆ ಸೀಮಿತವಾದ ರಸ್ತೆ ಕಾಮಗಾರಿ!

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಿಂದ ಚಿಕ್ಕಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು ನಾಲ್ಕು ಕಿಲೋಮೀಟರ್ ರಸ್ತೆ ಕಳೆದ ಹಲವು ವರ್ಷಗಳಿಂದ ತಗ್ಗು-ಗುಂಡಿಗಳಿಂದ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ.

ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಳ್ಳಕೆರೆ ತಾಲೂಕಿನ ಭಾಗವಾಗಿದ್ದರೂ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವುದರಿಂದ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ ಎಂಬ ಆರೋಪವೂ ಕೇಳಿಬಂದಿದೆ.ಇದಲ್ಲದೆ, ರಸ್ತೆ ದುರಸ್ತಿಗೆ ಗುದ್ದಲಿ ಪೂಜೆ ನಡೆದಿದ್ದರೂ ನಂತರ ಯಾವುದೇ ಕಾಮಗಾರಿ ಆರಂಭವಾಗದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಜಿಲ್ಲಾ ಕಾರ್ಯನಿರ್ವಹಣಾ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಮ್ಮ ಗ್ರಾಮವನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿ ನಿರ್ಗಮಿಸಿದ್ದು ಬಿಟ್ಟರೆ ಇಲ್ಲಿಯ ತನಕ ಯಾವುದೇ ರೀತಿಯ ಕ್ರಮ ಜರುಗಿಸಿಲ್ಲ, ರಸ್ತೆಯಿಲ್ಲ, ಸ್ವಚ್ಛತೆ, ವಿದ್ಯುತ್, ವ್ಯವಸ್ಥೆ ಇಲ್ಲ, ಶಾಸಕರು, ಸಿಇಓ,ಜಿಲ್ಲಾಧಿಕಾರಿಗಳಾಗಲಿ ಸಾರ್ವಜನಿಕರಿಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಕಾರ್ಯ ಕೈಗೊಂಡು ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡುತ್ತಾರ ಎಂದು ಕಾದು ನೋಡಬೇಕಿದೆ.

Edited By : Shivu K
PublicNext

PublicNext

21/03/2026 08:41 pm

Cinque Terre

6.11 K

Cinque Terre

0

ಸಂಬಂಧಿತ ಸುದ್ದಿ