ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡೂರು: ರಸ್ತೆ ಅಪಘಾತದಲ್ಲಿ ವೃದ್ಧ ಸಾವು ; ಮೋಟಾರ್ ಸೈಕಲ್ ಚಾಲಕನ ವಿರುದ್ಧ ಪ್ರಕರಣ ದಾಖಲು

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ ಎಂದು ಗುರುತಿಸಲಾಗಿದ್ದು, ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಡೂರು ಕಡೆಯಿಂದ ಬಂದ ಕೆ.ಎ-14 ಇ.ಕ್ಯೂ-7678 ಸಂಖ್ಯೆಯ ಮೋಟಾರ್ ಸೈಕಲ್ ಚಾಲಕ ಅತಿವೇಗ ಮತ್ತು ಅಜಾಗರುಕತೆಯಿಂದ ಚಾಲನೆ ಮಾಡಿ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದ ತೀವ್ರತೆಗೆ ಶೇಖರಪ್ಪ ಅವರ ತಲೆ ಮತ್ತು ಕಾಲಿಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿತ್ತು.

​ಅಪಘಾತಕ್ಕೀಡು ಮಾಡಿದ ಮೋಟಾರ್ ಸೈಕಲ್ ಚಾಲಕ ಹರಳಘಟ್ಟ ಗ್ರಾಮದ ಮನ್ ದೀಪ್ ಎಂಬುವವರಿಗೂ ಗಾಯಗಳಾಗಿದ್ದು, ಗಾಯಾಳು ಶೇಖರಪ್ಪ ಅವರನ್ನು ತಕ್ಷಣವೇ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮತ್ತಿಘಟ್ಟದ ಬಳಿ ಅವರು ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಮೃತರ ಪುತ್ರ ಮನುದೀಪ್ ಬಿನ್ ಪುಟ್ಟರಂಗಪ್ಪ ಅವರು ನೀಡಿದ ದೂರಿನ ಮೇರೆಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

21/03/2026 09:01 pm

Cinque Terre

220

Cinque Terre

0

ಸಂಬಂಧಿತ ಸುದ್ದಿ