ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಮಲೆನಾಡು ಭಾಗದ ಶೃಂಗೇರಿ, ಕೊಪ್ಪ ಮತ್ತು ಕಳಸ ಸೇರಿದಂತೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಈಗಾಗಲೇ ಆಲಿಕಲ್ಲು ಮಳೆಯಾಗಿದ್ದು, ಮುಂದಿನ 24 ರಿಂದ 48 ಗಂಟೆಗಳ ಕಾಲ ಇದೇ ರೀತಿಯ ಹವಾಮಾನ ಮುಂದುವರಿಯುವ ಸೂಚನೆ ಇದೆ. ಮಾರ್ಚ್ 21 ಮತ್ತು 22ರಂದು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಬಲವಾದ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ ವೇಗ) ಗುಡುಗು, ಮಿಂಚು ಮತ್ತು ಆಲಿಕಲ್ಲು ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾರಾಂತ್ಯದಲ್ಲಿ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಬಹುದಾದರೂ, ಮಾರ್ಚ್ 24ರ ಸುಮಾರಿಗೆ ಮತ್ತೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಈ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ತೋಟಗಾರಿಕಾ ಬೆಳೆಗಳಿಗೆ, ವಿಶೇಷವಾಗಿ ಕಾಫಿ ಮತ್ತು ಮಾವಿನ ಫಸಲಿಗೆ ಹಾನಿಯಾಗುವ ಸಾಧ್ಯತೆ ಇದೆ.

Edited By : PublicNext Desk
Kshetra Samachara

Kshetra Samachara

21/03/2026 09:39 pm

Cinque Terre

100

Cinque Terre

0

ಸಂಬಂಧಿತ ಸುದ್ದಿ