ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ತ್ಯಾವರೆಕೊಪ್ಪ ಸಿಂಹಧಾಮಕ್ಕೆ ಮೃಗಾಲಯ ಪ್ರಾಧಿಕಾರ ಅಧ್ಯಕ್ಷರ ಭೇಟಿ

ಶಿವಮೊಗ್ಗ: ನಗರದ ಹೊರವಲಯದ ಹುಲಿ -ಸಿಂಹಧಾಮದಲ್ಲಿ ಗುರುವಾರ ತಡರಾತ್ರಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ನೀರಾನೆ ದಾಳಿಗೆ ಸಿಲುಕಿ ಮೃತಪಟ್ಟ ಬೆನ್ನಲ್ಲೇ ಶನಿವಾರ ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗನಾಥ ಹಾಡ್ಯ ಅವರು ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಇನ್ನು ಘಟನೆ ಬಗ್ಗೆ ಹುಲಿ ಮತ್ತು ಸಿಂಹಧಾಮದ ಕಾರ್ಯನಿರ್ವಾಹಕ ಅಧಿಕಾರಿ ಅಮರಾಕ್ಷರ್ ರಿಂದ ಮಾಹಿತಿ ಪಡೆದರು. ಇದೇ ವೇಳೆ ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆಯನ್ನ ವೀಕ್ಷಣೆ ಮಾಡಿದರು. ವೈದ್ಯೆ ಸಾವಿನ ವೇಳೆ ಸ್ಥಳದಲ್ಲಿದ್ದ ವಸ್ತುಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಇದೇ ವೇಳೆ ಘಟನೆ ವೇಳೆ ಅಲ್ಲಿದ್ದ ಸಿಬ್ಬಂದಿ ವಿಚಾರಣೆ ಮಾಡಿದರು.

Edited By : Shivu K
PublicNext

PublicNext

21/03/2026 09:54 pm

Cinque Terre

3.95 K

Cinque Terre

0

ಸಂಬಂಧಿತ ಸುದ್ದಿ