ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಂಜಾನ್ ಹಬ್ಬದ ದಿನವೇ ರಸ್ತೆ ಅಪಘಾತದಲ್ಲಿ ಯುವಕ ಸಾವು ..!

ಧಾರವಾಡ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಹೊರವಲಯದ ಚಿಕ್ಕಮಲ್ಲಿಗವಾಡ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.

ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದ ಇಮಾಮ್ ಹೆಬ್ಬಳ್ಳಿ ಎಂಬ ಯುವಕನೇ ಸಾವನ್ನಪ್ಪಿದ ಮೃತ ದುರ್ದೈವಿ.

ತನ್ನ ಸಹೋದರನ ಭಾವಿ ಪತ್ನಿ ಮನೆಗೆ ಹೋಗಿ ವಾಪಸ್ ಬರುವಾಗ ಇಮಾಮ್, ಬೈಕ್ ತೆಗೆದುಕೊಂಡು ಸರ್ವಿಸ್ ರಸ್ತೆಯಿಂದ ಬೈಪಾಸ್ ರಸ್ತೆ ಹತ್ತುವಾಗ ಲಾರಿ ಡಿಕ್ಕಿ ಹೊಡೆದಿದೆ. ಹಿಂಬದಿ ಇದ್ದ ಮತ್ತೋರ್ವ ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದ್ದು, ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸದ್ಯ ಈ ಕುರಿತು ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

21/03/2026 10:40 pm

Cinque Terre

22.36 K

Cinque Terre

7

ಸಂಬಂಧಿತ ಸುದ್ದಿ