ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಳಮೀಸಲಾತಿ ಜಾರಿ ಸಮೀಕ್ಷೆ ವಿರುದ್ಧ ಆಕ್ರೋಶ!

ಕೋಲಾರ : ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರ ನಡೆಸಿದ ಕುಟುಂಬ ಸಮೀಕ್ಷೆ ಸಮರ್ಪಕವಾಗಿಲ್ಲ, ಸಮೀಕ್ಷೆಯಿಂದ ಭೋವಿ ಸಮಾಜಕ್ಕೆ ಅನ್ಯಾಯವಾಗಿದೆ ಎಂದು, ಭೋವಿ ಯುವ ವೇದಿಕೆ ಸಂಘಟನೆ ಮುಖಂಡರು ಆರೋಪಿಸಿದ್ದಾರೆ. ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖಂಡರು, ಈ ಹಿಂದಿನ ಪ್ರಕಾರವೇ ಒಳಮೀಸಲಾತಿ ಮುಂದುವರಿಸಲಿ, ನ್ಯಾ. ನಾಗಮೋಹನ್ ದಾಸ್ ವರದಿಯನ್ನು ನಾವು ಒಪ್ಪುವುದಿಲ್ಲ. ಈ ಸಂಬಂಧ ರಾಜ್ಯಪಾಲರಿಗೆ, ಸಿಎಂ ಸೇರಿದಂತೆ ಎಲ್ಲರಿಗೂ ಪತ್ರ ಕೊಟ್ಟಿದ್ದೇವೆ, ಸಮೀಕ್ಷೆ ವೇಳೆ ಮನೆ ಮನೆಗೆ ಭೇಟಿ ನೀಡಿಲ್ಲ, ಎಲ್ಲೋ ಕುಳಿತುಕೊಂಡು ಸಮೀಕ್ಷೆ ಮಾಡಿದ್ದಾರೆ, ಒಳಮೀಸಲಾತಿ ಸಮೀಕ್ಷೆ ಅವೈಜ್ಞಾನಿಕವಾಗಿದೆ. ಹಾಗಾಗಿ ಒಳಮೀಸಲಾತಿಯನ್ನು ವಿರೋಧಿಸಿ, ಮಾರ್ಚ್‌ 24 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಮುಖಂಡರು ಹೇಳಿಕೆ ನೀಡಿದ್ದಾರೆ.

Edited By : Shivu K
PublicNext

PublicNext

21/03/2026 10:45 pm

Cinque Terre

2.97 K

Cinque Terre

0

ಸಂಬಂಧಿತ ಸುದ್ದಿ