ಕೋಲಾರ: ಕೋಲಾರ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರ ಸೀತಿ ಗ್ರಾಮದಲ್ಲಿ ನಾಳೆ (ದಿನಾಂಕ) ಶ್ರೀ ಪತ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ಜರುಗಲಿದೆ. ಮಧ್ಯಾಹ್ನ 1:30ಕ್ಕೆ ರಥೋತ್ಸವಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಚಾಲನೆ ನೀಡಲಿದ್ದಾರೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ.
ತಾರೆಯರ ಸಾಂಸ್ಕೃತಿಕ ಸಂಭ್ರಮ
ಸೀತಿ ಜಾತ್ರೆಯ ಪ್ರಯುಕ್ತ ನಾಳೆ ಸಂಜೆ 7 ಗಂಟೆಗೆ ಕಾಂಗ್ರೆಸ್ ಮುಖಂಡ ಮುರಳಿಗೌಡ ಅವರು ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಖ್ಯಾತ ನಟ ಡಾಲಿ ಧನಂಜಯ, ಹಾಸ್ಯನಟ ಸಾಧುಕೋಕಿಲ ಸೇರಿದಂತೆ ಹಲವು ಕಿರುತೆರೆ ಹಾಸ್ಯ ಕಲಾವಿದರು ಭಾಗವಹಿಸಲಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತು ಕಾಂಗ್ರೆಸ್ ಮುಖಂಡ ಮುರಳಿಗೌಡ ಮಾಹಿತಿ ನೀಡಿದ್ದಾರೆ.
PublicNext
21/03/2026 10:58 pm
LOADING...