ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಮಡಿಕೇರಿ : ಕೇಂದ್ರ ಸರ್ಕಾರವು ಗೃಹಬಳಕೆ ಮತ್ತು ವಾಣಿಜ್ಯ ಅಡುಗೆ ಅನಿಲ ಬೆಲೆಯನ್ನು ಏಕಾಏಕಿ ಹೆಚ್ಚಿಸಿದ್ದನ್ನು ವಿರೋಧಿಸಿ ನಗರ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು. ನಗರದ ಇಂದಿರಾ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿದ ನೂರಾರು ಕಾರ್ಯಕರ್ತರು, ಕೇಂದ್ರ ಸರ್ಕಾರ, ಬಿಜೆಪಿ ಆಡಳಿತ, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ವೈಫಲ್ಯಕ್ಕೆ ಟಿ.ಪಿ. ರಮೇಶ್ ವಾಗ್ದಾಳಿ

ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 430 ರೂಪಾಯಿ ಇದ್ದ ಗ್ಯಾಸ್ ಬೆಲೆ ಇಂದು ಸಾವಿರದ ಸನಿಹಕ್ಕೆ ತಲುಪಿದ್ದು, ಇದು ನರೇಂದ್ರ ಮೋದಿಯವರ ಆಡಳಿತದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Edited By : PublicNext Desk
PublicNext

PublicNext

24/03/2026 06:23 pm

Cinque Terre

11.01 K

Cinque Terre

0

ಸಂಬಂಧಿತ ಸುದ್ದಿ