ಮಡಿಕೇರಿ : ಶ್ರೀಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಇದೇ ಮಾ.26 ಮತ್ತು 27 ರಂದು ವಿಜೃಂಭಣೆಯಿಂದ ನಡೆಯಲಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಕೋದಂಡ ರಾಮೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಅವರು ಎರಡು ದಿನಗಳ ಕಾಲ ನಡೆಯುವ ಧಾರ್ಮಿಕ ವಿಧಿ ವಿಧಾನಗಳ ಕುರಿತು ಮಾಹಿತಿ ನೀಡಿದರು.ಮಾ.26ರಂದು ಸಂಜೆ 5 ಗಂಟೆಗೆ ಶ್ರೀ ರಾಮೋತ್ಸವದ ಅಂಗವಾಗಿ ಮಡಿಕೇರಿಯ ಗಾಂಧಿ ಮೈದಾನದಿಂದ ನಗರದಲ್ಲಿ ಭವ್ಯ ಮೆರವಣಿಗೆ ಸಾಗಲಿದೆ. ಮೆರವಣಿಗೆ ಸಂದರ್ಭ ವಿಶೇಷ ಪಲ್ಲಕ್ಕಿಯಲ್ಲಿ ಆಸೀನಗೊಂಡ ಶ್ರೀ ಕೋದಂಡ ರಾಮ ಪರಿವಾರ ಉತ್ಸವ ಮೂರ್ತಿಯನ್ನು ಹೊತ್ತು ನಗರದ ಪ್ರಮುಖ ರಸ್ತೆಗಳಲ್ಲಿ ತೆರಳಲಾಗುತ್ತದೆ. ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತಕ್ಕೆ ಸಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುತ್ತದೆ. ವಿವಿಧ ಆಕರ್ಷಕ ನೃತ್ಯ, ಚಂಡೆ ವಾದ್ಯ ಸಹಿತ ಸಾಂಸ್ಕೃತಿಕ ಕಲಾತಂಡಗಳು, ಕಲಶ ಹೊತ್ತ ಮಹಿಳೆಯರು, ವಿವಿಧ ತಂಡಗಳಿಂದ ಭಜನೆಯೊಂದಿಗೆ ಮೆರವಣಿಗೆ ಸಾಗಲಿದೆ ಎಂದರು.
Kshetra Samachara
24/03/2026 06:42 pm
LOADING...