ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ಜಿಲ್ಲಾಧಿಕಾರಿಯಿಂದ SSLC ಪರೀಕ್ಷಾ ಕೇಂದ್ರ ಪರಿಶೀಲನೆ !

ಹಾಸನ : ನಗರದ ವಾಣಿವಿಲಾಸ ಬಾಲಕಿಯರ ಶಾಲೆಯ SSLC ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರೀಕ್ಷಾ ಕೇಂದ್ರದಲ್ಲಿನ ವ್ಯವಸ್ಥೆಗಳನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲಾದ್ಯಂತ ಪರೀಕ್ಷೆಗಳು ಅತ್ಯಂತ ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯುತ್ತಿವೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಬೆಳಕು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದರು.

Edited By : PublicNext Desk
PublicNext

PublicNext

24/03/2026 06:53 pm

Cinque Terre

9.94 K

Cinque Terre

0