ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ವಿಧಾನಸಭೆ ಕಲಾಪ ವೀಕ್ಷಿಸಿದ ವಿದ್ಯಾರ್ಥಿಗಳು !

ಹಾಸನ : ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನ ಸುಮಾರು 60 ವಿದ್ಯಾರ್ಥಿಗಳು ಇಂದು ವಿಧಾನಸಭೆಯ ಕಲಾಪವನ್ನು ವೀಕ್ಷಿಸುವ ಅಪರೂಪದ ಅವಕಾಶವನ್ನು ಪಡೆದುಕೊಂಡರು.

ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಪಿ. ಸ್ವರೂಪ್ ಪ್ರಕಾಶ್ ಹಾಗೂ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ ಅವರ ನೇತೃತ್ವದಲ್ಲಿ ಈ ಭೇಟಿ ಆಯೋಜನೆಗೊಂಡಿತ್ತು. ಒಟ್ಟು 35 ವಿದ್ಯಾರ್ಥಿಗಳು, 25 ವಿದ್ಯಾರ್ಥಿನಿಯರು ಹಾಗೂ 5 ಜನ ಶಿಕ್ಷಕರು ಅಧಿವೇಶನದಲ್ಲಿ ಪಾಲ್ಗೊಂಡು ಸದನದ ನಡವಳಿಕೆಗಳನ್ನು ಹತ್ತಿರದಿಂದ ವೀಕ್ಷಿಸಿದರು.

Edited By : PublicNext Desk
PublicNext

PublicNext

24/03/2026 06:54 pm

Cinque Terre

11.31 K

Cinque Terre

0

ಸಂಬಂಧಿತ ಸುದ್ದಿ