ಹಾಸನ : ಸಕಲೇಶಪುರ, ಆಲೂರು ಮತ್ತು ಕಟ್ಟಾಯ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ಸಮಸ್ತ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಅವರು ಸದನದಲ್ಲಿ ಸರ್ಕಾರವನ್ನು ಆಗ್ರಹಿಸಿದರು.
ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡೆ ಅತ್ಯಗತ್ಯ. ಆದರೆ, ಅನೇಕ ಶಾಲೆಗಳಲ್ಲಿ ದೈಹಿಕ ಶಿಕ್ಷಕರಿಲ್ಲದೆ ಕ್ರೀಡಾ ಚಟುವಟಿಕೆಗಳು ಕುಂಠಿತಗೊಂಡಿವೆ ಎಂದು ಕಳವಳ ವ್ಯಕ್ತಪಡಿಸಿದರು.
PublicNext
24/03/2026 06:56 pm
LOADING...