ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ಮಾಜಿ ಸಂಸದ ಪ್ರಜ್ವಲ್ ಕೇಸ್ ಚಾರ್ಜ್‌ಶೀಟ್‌ ನಲ್ಲಿ ಲೋಪ ಆರೋಪ - ಉಗ್ರ ಹೋರಾಟದ ಎಚ್ಚರಿಕೆ !

ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಅಶ್ಲೀಲ ವೀಡಿಯೋಗಳಿರುವ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಗಂಭೀರ ಲೋಪದೋಷಗಳಿವೆ ಎಂದು ಜೆಡಿಎಸ್ ಕಾನೂನು ಘಟಕದ ಎಂ.ಬಿ. ವಿಶ್ವನಾಥ್ ಆರೋಪಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕೂಡಲೇ ಲೋಪಗಳನ್ನು ಸರಿಪಡಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ. ವಕೀಲ ಪೂರ್ಣಚಂದ್ರ ಅವರು ನೀಡಿದ ದೂರಿನ ಆಧಾರದ ಮೇಲೆ 52 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಆದರೆ, ಪೊಲೀಸರು ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿಲ್ಲ ಎಂದು ವಿಶ್ವನಾಥ್ ದೂರಿದ್ದಾರೆ.

Edited By : PublicNext Desk
PublicNext

PublicNext

24/03/2026 07:00 pm

Cinque Terre

12.98 K

Cinque Terre

1

ಸಂಬಂಧಿತ ಸುದ್ದಿ