ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯ ಮನೆಯೊಂದರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳರು ದೋಚಿರುವ ಪ್ರಕರಣ ನಡೆದಿದೆ.
ನವೀನ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ನವೀನ್ ತಮ್ಮ ಪತ್ನಿ ಮತ್ತು ಮಗುವನ್ನು ನೋಡಲು ಊರಿಗೆ ತೆರಳಿದ್ದ ವೇಳೆ ಖದೀಮರು ಮನೆಗೆ ನುಗ್ಗಿ ಬಾಗಿಲು ಮೀಟಿ, ಮನೆಯ ಬೀರುವಿನಲ್ಲಿನ ಸರಿ ಸುಮಾರು 10 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
24/03/2026 08:13 pm
LOADING...