ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ನಿಯಂತ್ರಣ ತಪ್ಪಿ ಕಾರು ಅಪಘಾತ, ಪಾದಚಾರಿ ಸಾವು

ಶಿವಮೊಗ್ಗ : ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಜಂಬರಘಟ್ಟೆ ಬಳಿ ನಿಯಂತ್ರಣ ತಪ್ಪಿದ ಕಾರು ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಕಲ್ಲಜ್ಜನಾಳ್‌ ನಿವಾಸಿ ರಾಜಪ್ಪ (60) ಮೃತಪಟ್ಟ ದುರ್ದೈವಿ. ರಾಜಪ್ಪ ಅವರು ಬುಧವಾರ ಹೊಳೆಹೊನ್ನೂರಿನಿಂದ ಕಲ್ಲಜ್ಜನಾಳ್‌ ಕಡೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಚನ್ನಗಿರಿ ಕಡೆಯಿಂದ ಶಿವಮೊಗ್ಗದ ಕಡೆಗೆ ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಾಜಪ್ಪ ಅವರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯಾದ ರಭಸಕ್ಕೆ ಕಾರು ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ತೆಂಗಿನ ಮರಕ್ಕೆ ಗುದ್ದಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ರಾಜಪ್ಪ ಅವರು ಕೊನೆಯುಸಿರೆಳೆದಿದ್ದಾರೆ.

ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Edited By : Abhishek Kamoji
Kshetra Samachara

Kshetra Samachara

25/03/2026 09:44 pm

Cinque Terre

1.48 K

Cinque Terre

0

ಸಂಬಂಧಿತ ಸುದ್ದಿ