ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು ದೊಡ್ಡಜಾತ್ರಾ ಮಹೋತ್ಸವ -2026

ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವ ಮಾರ್ಚ್ 30-2026 ರಂದು ನಡೆಯಲಿದೆ.

ದಿನಾಂಕ 27-03-2026 ರಂದು ಶುಕ್ರವಾರ ಸಂಜೆ 7 ಗಂಟೆಗೆ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಶ್ರೀಕಂಠ ಮುಡಿ ಉತ್ಸವ, ದಿನಾಂಕ 30-03-2026 ರಂದು ಸೋಮವಾರ ಬೆಳಿಗ್ಗೆ 5:50 ರಿಂದ 6:30 ರ ಒಳಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯವರ ಗೌತಮ ಪಂಚ ಮಹಾ ರಥೋತ್ಸವ ಜರುಗಲಿದೆ.

ದಿನಾಂಕ 01-04-2026 ರಂದು ಬುಧವಾರ ರಾತ್ರಿ 7 ಗಂಟೆಗೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವ ನಡೆಯಲಿದೆ. ಭಕ್ತ ಮಹಾಶಯರುಗಳಾದ ತಾವುಗಳು ಸಪರಿವಾರ ಸಮೇತ ದೊಡ್ಡ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ಶ್ರೀ ನಂಜುಂಡೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ವಿನಂತಿಸಲಾಗಿದೆ. ಸರ್ವರಿಗೂ ಸ್ವಾಗತ ಕೋರುವವರು ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಆಡಳಿತ ಮಂಡಳಿ ನಂಜನಗೂಡು.

Edited By :
PublicNext

PublicNext

26/03/2026 02:18 pm

Cinque Terre

15.51 K

Cinque Terre

0