ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ

ಚಳ್ಳಕೆರೆ: ಬೆಳೆ ಕೈಕೊಟ್ಟ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಜಮೀನಿನಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂಜನ ಮೂರ್ತಿ (48) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ.

ಚಿತ್ರದುರ್ಗ ಟೈಗರ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ 7 ಲಕ್ಷ, ಓಬಳಾಪುರ ಪ್ರಗತಿ ಗ್ರಾಮೀಣ ಬ್ಯಾಂಕ್ ನಲ್ಲಿ 1 ಲಕ್ಷ ಸಾಲ ರೂಪಾಯಿ ರೈತ ನಿರಂಜನ್ ಮೂರ್ತಿ ಸಾಲ ಮಾಡಿದ್ದ.

ಸಾಲಬಾಧೆ ತಾಳದೇ ರೈತ ನಿರಂಜನ್ ಮೂರ್ತಿ ಸೂಸೈಡ್ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಜೀವನ ಪೂರ್ತಿ ಬೆಳೆದ ಬೆಳೆಗೆ ಉತ್ತಮ ದರ ಸಿಕ್ಕಿಲ್ಲ, ಇದರಿಂದ ನಾನು ಸಾಲದ ಸುಳಿಗೆ ಸಿಲುಕಿದ್ದೇನೆ.

ನನ್ನ ಕುಟುಂಬ ನಡು ನೀರಿನಲ್ಲಿ ಬಿಟ್ಟು ಹೋಗುತ್ತಿದ್ದು, ಮಡದಿ ಮಕ್ಕಳು ಕ್ಷಮಿಸಿ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ.

ಸ್ಥಳಕ್ಕೆ ತಳಕು ಪಿಎಸ್ಐ ಶಿವಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

27/03/2026 10:10 am

Cinque Terre

7.94 K

Cinque Terre

0

ಸಂಬಂಧಿತ ಸುದ್ದಿ