ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 4ನೇ ತಿರುವಿನಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಮರ ಬಿದ್ದ ಪರಿಣಾಮ ಘಾಟಿಯ ಎರಡು ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಲು ಸ್ಥಳೀಯರು ಹಾಗೂ ವಾಹನ ಚಾಲಕರು ಕಾರ್ಯಾಚರಣೆ ಆರಂಭಿಸಿದರು. ಅರಣ್ಯ ಇಲಾಖೆ ಸಿಬ್ಬಂದಿ ಕೂಡ ಕಾರ್ಯಾಚರಣೆ ನಡೆಸಿದರು ಎಂದು ತಿಳಿದು ಬಂದಿದೆ. ಬೃಹತ್ ಮರವನ್ನು ಕತ್ತರಿಸಿ ರಸ್ತೆಯಿಂದ ಬದಿಗೆ ಸರಿಸಲಾಗಿದೆ.

ಸದ್ಯ ಲಭ್ಯವಿರುವ ಮಾಹಿತಿಯ ಪ್ರಕಾರ, ರಸ್ತೆಯಲ್ಲಿದ್ದ ಮರವನ್ನು ತೆರವುಗೊಳಿಸಲಾಗಿದೆ. ಇದರಿಂದಾಗಿ ಸ್ಥಗಿತಗೊಂಡಿದ್ದ ವಾಹನ ಸಂಚಾರ ಈಗ ಪುನಾರಂಭಗೊಂಡಿದ್ದು, ಘಾಟಿಯಲ್ಲಿ ಸಂಚಾರ ಸುಗಮವಾಗಿದೆ. ಆಗುಂಬೆ ಘಾಟಿಯು ಶಿವಮೊಗ್ಗ ಮತ್ತು ಉಡುಪಿ ನಡುವೆ ಸಂಪರ್ಕ ಕಲ್ಪಿಸುತ್ತದೆ.

Edited By : Vijay Kumar
PublicNext

PublicNext

27/03/2026 10:29 am

Cinque Terre

8.02 K

Cinque Terre

0

ಸಂಬಂಧಿತ ಸುದ್ದಿ