ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೊಡ್ಡ ಜಾತ್ರೆಗೆ ಡ್ರೋನ್ ಕ್ಯಾಮೆರಾಗಳ ಹಾರಾಟ ಇಲ್ಲ: ಪೊಲೀಸ್ ಇಲಾಖೆಯಿಂದ ಪ್ರಕಟಣೆ

ನಂಜನಗೂಡು: ಮಾ.30 ರಂದು ನಡೆಯುವ ಐತಿಹಾಸಿಕ ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ರಥೋತ್ಸವದ ವೇಳೆ ಡ್ರೋನ್ ಕ್ಯಾಮೆರಾಗಳ ಹಾರಾಟವನ್ನು ನಿಷೇಧಿಸಿ ಆದೇಶ ನೀಡಲಾಗಿದೆ.

ಶ್ರೀ ನಂಜುಂಡೇಶ್ವರ ಸ್ವಾಮಿಯ ಗೌತಮ ಪಂಚ ಮಹಾ ರಥೋತ್ಸವ ನಡೆಯುವ ಸಂದರ್ಭದಲ್ಲಿ ಚಿತ್ರೀಕರಣ ಮಾಡಲು ಖಾಸಗಿ ಡ್ರೋನ್ ಕ್ಯಾಮೆರಾ ಗಳ ಹಾರಾಟ ಹೆಚ್ಚಾಗಿತ್ತು. ಇದನ್ನು ಮನಗಂಡು ಖಾಸಗಿ ಡ್ರೋನ್ ಕ್ಯಾಮೆರಾ ಉಪಯೋಗಕ್ಕೆ ಸಂಬಂಧಪಟ್ಟಂತೆ ಡ್ರೋನ್ ಕ್ಯಾಮೆರಾ ಗಳ ಹಾರಾಟವನ್ನು ಮೈಸೂರು ಜಿಲ್ಲಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಡ್ರೋನ್ ರೂಲ್ಸ್ ಕಾಯ್ದೆ ರೀತ್ಯಾ ನಿಷೇಧಿಸಲಾಗಿದ್ದು, ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಡ್ರೋನ್ ಕ್ಯಾಮೆರಾಗಳ ಹಾರಾಟ ಮಾಡತಕ್ಕದ್ದಲ್ಲ. ಒಂದು ವೇಳೆ ಕಾನೂನು ಉಲ್ಲಂಘಿಸಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಿಂದ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

28/03/2026 01:41 pm

Cinque Terre

2.58 K

Cinque Terre

0