ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಳೆನರಸೀಪುರ: ರಸ್ತೆ ದಾಟುವಾಗ ಕಾರು ಡಿಕ್ಕಿ – ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

ಹೊಳೆನರಸೀಪುರ : ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಚಿರಂತ್ (16) ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‍ನಲ್ಲಿ ಊರಿಗೆ ಬಂದಿದ್ದ ಬಾಲಕ ರಸ್ತೆ ದಾಟುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿಯಾಗಿದೆ. ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

Edited By :
PublicNext

PublicNext

28/03/2026 08:14 pm

Cinque Terre

11.86 K

Cinque Terre

0