ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ - ಮಂತ್ರಿ ಮೋಹನ್ ದಾಸ್

ಮಡಿಕೇರಿ: ಪಂಚ ಗ್ಯಾರಂಟಿ ಯೋಜನೆಯ ಎಲ್ಲಾ ಪ್ರಯೋಜನಗಳು ಫಲಾನುಭವಿಗಳಿಗೆ ದೊರಕಬೇಕಾದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಹೇಳಿದ್ದಾರೆ.

ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ನಡೆದ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38,271 ಪಡಿತರ ಚೀಟಿದಾರರು ಇದ್ದು, ಇವರಿಗೆ ಈಗಾಗಲೇ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಮತ್ತು ಹೆಸರು ತೆಗೆದು ಹಾಕುವುದಕ್ಕೆ ಅರ್ಜಿ ಸಲ್ಲಿಸಲು ಮಾ.31 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ನಿರೀಕ್ಷಕರಾದ ವೀಣಾ ಅವರು ಸಭೆಗೆ ಮಾಹಿತಿ ನೀಡಿದರು.

ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ ಅವರು ಮಾತನಾಡಿ, ಮಡಿಕೇರಿ ತಾಲ್ಲೂಕಿನಲ್ಲಿ ಶೇಕಡವಾರು ಸಾಧನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಮಿತಿ ಸದಸ್ಯರಾದ ಪ್ರಭು ರೈ ಅವರು ಮಾತನಾಡಿ, ನಗರದಲ್ಲಿ ಅಡುಗೆ ಅನಿಲ ಸರಬರಾಜುದಾರ ಏಜೆನ್ಸಿಯೊಂದು ಒಂದೇ ಹೋಟೆಲ್ಗೆ 20 ಅಡುಗೆ ಅನಿಲ ಪೂರೈಕೆ ಮಾಡಿದ್ದು, ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು.

Edited By : PublicNext Desk
Kshetra Samachara

Kshetra Samachara

29/03/2026 07:36 am

Cinque Terre

260

Cinque Terre

0

ಸಂಬಂಧಿತ ಸುದ್ದಿ