ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ

ಮಡಿಕೇರಿ: ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಟಾಸ್ ಫೋರ್ಸ್ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಅದರಂತೆ ತಹಶೀಲ್ದಾರ್ ಅವರು ಮಾತನಾಡಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನಗಳನ್ನು ಚಾಚುತಪ್ಪದೆ ಪಾಲಿಸುವಂತೆ ನಿರ್ದೇಶನ ನೀಡಿದರು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016ರ ಅಡಿ ನೇಮಕಗೊಂಡಿರುವ ಹೆಚ್ಚುವರಿ ನಿರೀಕ್ಷಕರುಗಳು ತಮ್ಮ ಕಾರ್ಯವ್ಯಾಪ್ತಿಯ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳು, ಹಾಗೂ ತೋಟಗಳ ಮಾಲೀಕರಿಂದ ಸ್ವಯಂ ಘೋಷಣಾ ಪತ್ರಗಳನ್ನು ಪಡೆದು ಈ ವರದಿಯನ್ನು ಪಡೆಯಲು ಹಾಗೂ ಬಾಲಕಾರ್ಮಿಕ ಮುಕ್ತ ತಾಲ್ಲೂಕುಗಳನ್ನಾಗಿಸಲು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016ರ ಕಲಂ 16 ಮತ್ತು 17 ರಡಿ ನೇಮಕಗೊಂಡ ನಿರೀಕ್ಷಕರು ತಮ್ಮ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಪ್ರತಿ ತಿಂಗಳು ಹೆಚ್ಚೆಚ್ಚು ತಪಾಸಣೆ ಹಾಗೂ ವ್ಯಾಪಕ ಪ್ರಚಾರ ಕೈಗೊಂಡು ಅದರ ವರದಿಯನ್ನು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಕೊಡಗು ಜಿಲ್ಲೆ, ಮಡಿಕೇರಿರವರಿಗೆ ಸಲ್ಲಿಸಲು ಸೂಚಿಸಿದರು.

ಮಡಿಕೇರಿ ವೃತ್ತ ಕಾರ್ಮಿಕ ಇಲಾಖೆಯ ಹಿರಿಯ ನಗರಸಭೆ ಸುರೇಶ್, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರೀಕ್ಷಕರಾದ ಪಾಲಾಕ್ಷ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್.ಶೀರಾಜ್ ಅಹ್ಮದ್ ಹಾಗೂ ಸಿಬ್ಬಂದಿ ಗಳಾದ ರಕ್ಷಿತ್, ಶೋಭ ಮತ್ತು ಪ್ರಿಯಾಂಕ ಪಾಲ್ಗೊಂಡಿದ್ದರು.

Edited By : PublicNext Desk
PublicNext

PublicNext

29/03/2026 07:38 am

Cinque Terre

2.85 K

Cinque Terre

0

ಸಂಬಂಧಿತ ಸುದ್ದಿ