ಹಗರಿಬೊಮ್ಮನಹಳ್ಳಿ : ಚಾಲಕನ ಸಮಯ ಪ್ರಜ್ಞೆಯಿಂದ ಹತ್ತಾರು ಜೀವಗಳು ಉಳಿದಿವೆ. ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಆದ್ರೆ ಅದೃಷ್ಟವಶಾತ್ ಅನಾಹುತ ತಪ್ಪಿದಂತಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ- ಶಿವಮೊಗ್ಗ ರಾಜ್ಯ ಹೆದ್ದಾರಿಯ ಹಗರಿಬೊಮ್ಮನಹಳ್ಳಿ ತಾಲೂಕಿನ ಪಿಂಜಾರ್ ಹೆಗ್ಡಾಳ್ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಬ್ರೇಕ್ ಫೇಲ್ ಆಗಿದೆ. ಈ ವೇಳೆ ಗೇರ್ ನಲ್ಲೇ ಕಂಟ್ರೋಲ್ ಮಾಡಿದ್ರೂ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ನುಜ್ಜುಗುಜ್ಜಾಗಿದೆ. KSRTC ಬಸ್ಸು ಹಗರಿಬೊಮ್ಮನಹಳ್ಳಿಯಿಂದ ಹೊಸಪೇಟೆಗೆ ತೆರಳುತ್ತಿತ್ತು. ಈ ವೇಳೆ ಬ್ರೇಕ್ ಫೇಲ್ ಆದಾಗ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
29/03/2026 11:45 am
LOADING...