ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಇಲಾಖೆ ಅಧಿಕಾರಿ/ಸಿಬ್ಬಂದಿಗಳಿಗೆ ನೀಡುವ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಮೂವರು ಪೊಲೀಸರು ಪಡೆದುಕೊಂಡಿದ್ದಾರೆ.

ಉಡುಪಿ ನಗರ ಠಾಣೆಯ ಎಎಸ್‌ಐ ಚಂದ್ರ ಶೆಟ್ಟಿ, ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಸಂತೋಷ್ ಶೆಟ್ಟಿ ಕಾರ್ಕಳ ನಕ್ಸಲ್ ನಿಗ್ರಹ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮಂಜುನಾಥ ದೇವರಮನೆ ಅವರು ಅತ್ಯುನ್ನತ ಸೇವೆಗಾಗಿ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿದ್ದಾರೆ.

ಪದಕ ಪುರಸ್ಕೃತರನ್ನು ಪೊಲೀಸ್ ಅಧೀಕ್ಷಕ ಹಾಗೂ ಕರಾವಳಿ ಕಾವಲು ಪಡೆ ಮತ್ತು ನಕ್ಸಲ್ ನಿಗ್ರಹ ಪಡೆಯ ಪ್ರಭಾರ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅಭಿನಂದಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

30/03/2026 12:26 pm

Cinque Terre

2.61 K

Cinque Terre

0