ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಪೌಂಡ್‌ ಹಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಶಿವಮೊಗ್ಗ: ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ಕರಡಿ ನುಗ್ಗಿದೆ. ಇಂದು ಬೆಳಗ್ಗೆ ಘಟನೆ ನಡೆದಿದ್ದು, ಕರಡಿ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಹಾರ ಅರಸುತ್ತ ಬಂದಿರುವ ಕರಡಿಯೊಂದು ಇಂದು ಬೆಳಗ್ಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿನ ಮನೆಗಳು, ತೋಟಗಳ ಪಕ್ಕದಲ್ಲಿ ಕರಡಿ ಓಡಾಡಿದೆ. ಸ್ಥಳೀಯರು ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.

ವಿನಾಯಕ ನಗರದಲ್ಲಿ ಕರಡಿ ಕಾಣಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸುತ್ತಿದ್ದರು. ಇದೇ ವೇಳೆ ವಿಮಾನ ನಿಲ್ದಾಣದ ಕಾಂಪೌಂಡ್‌ ಒಳಗೆ ಹಾರಿದೆ. ವಿಮಾನ ನಿಲ್ದಾಣದ ಕಾಂಪೌಂಡ್‌ ಒಳಗೆ ಪೊದೆ ಬೆಳೆದಿದ್ದು ಕರಡಿ ಅವಿತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸದ್ಯ ವಿಮಾನ ನಿಲ್ದಾಣದ ಮತ್ತು ವಿನಾಯಕ ನಗರ ಭಾಗದಲ್ಲಿ ಕರಡಿಗಾಗಿ ಶೋಧ ಕಾರ್ಯ ನಡೆಸಿ ಅರಣ್ಯಾಧಿಕಾರಿಗಳು ಸದ್ಯ ಕರಡಿಯನ್ನ ಸೆರೆ ಹಿಡಿದಿದ್ದಾರೆ.

Edited By : Vinayak Patil
PublicNext

PublicNext

30/03/2026 04:11 pm

Cinque Terre

8.55 K

Cinque Terre

0

ಸಂಬಂಧಿತ ಸುದ್ದಿ