ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ: ವಣಗೂರು ಸಬ್ಬಮ್ಮ ದೇವಿ ದೇವಾಲಯಕ್ಕೆ ಡಿ.ವಿ. ಸದಾನಂದ ಗೌಡ ಭೇಟಿ

ಸಕಲೇಶಪುರ: ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ ಅವರು ಕುಟುಂಬ ಸಮೇತರಾಗಿ ತಾಲೂಕಿನ ಐತಿಹಾಸಿಕ ವಣಗೂರು ಸಬ್ಬಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ದೇವಾಲಯವು ತಮ್ಮ ಕುಟುಂಬದ ಕುಲದೈವವಾದ ಸಬ್ಬಮ್ಮ ದೇವಿಯ ಮೂಲಸ್ಥಾನ ಎಂಬ ವಿಷಯ ಇತ್ತೀಚೆಗೆ ತಿಳಿದು ಬಂದ ಹಿನ್ನೆಲೆಯಲ್ಲಿ ಸದಾನಂದ ಗೌಡರು ಕುಟುಂಬ ಸಮೇತರಾಗಿ ಆಗಮಿಸಿ ಭಕ್ತಿಭಾವದಿಂದ ದೇವರ ದರ್ಶನ ಮಾಡಿಕೊಂಡು ಆಶೀರ್ವಾದ ಪಡೆದರು. ಈ ವೇಳೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಕಲೇಶಪುರ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ಅವರು ಸದಾನಂದ ಗೌಡರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸ್ಥಳೀಯ ಸಂಪ್ರದಾಯದಂತೆ ಗೌರವ ಸೂಚಿಸಿ ಅವರನ್ನು ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಸದಾನಂದ ಗೌಡರು, “ಸಕಲೇಶಪುರ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕರಾದ ಸಿಮೆಂಟ್ ಮಂಜು ಅವರು ಶ್ರಮಪಟ್ಟು ಕಾರ್ಯನಿರ್ವಹಿಸುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಅವರಲ್ಲಿ ಇದೆ. ಕ್ಷೇತ್ರದ ಅಭಿವೃದ್ಧಿಗೆ ಅವರು ಇನ್ನಷ್ಟು ಉತ್ತಮ ಕೆಲಸಗಳನ್ನು ಮಾಡಲಿ ಎಂದು ಆಶಿಸುತ್ತೇನೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದೇವಾಲಯಕ್ಕೆ ಆಗಮಿಸಿದ ಸದಾನಂದ ಗೌಡರನ್ನು ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು. ದೇವಾಲಯದ ಇತಿಹಾಸ ಹಾಗೂ ಮಹತ್ವದ ಕುರಿತು ಅವರಿಗೆ ವಿವರಿಸಲಾಯಿತು. ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಸೇರಿದಂತೆ ಅನೇಕ ಭಕ್ತರು ಉಪಸ್ಥಿತರಿದ್ದರು.

Edited By : Manjunath H D
PublicNext

PublicNext

30/03/2026 08:34 pm

Cinque Terre

10.78 K

Cinque Terre

0

ಸಂಬಂಧಿತ ಸುದ್ದಿ