ಯಾದಗಿರಿ : ಯಾದಗಿರಿಯ ಸುರಪುರ ತಾಲೂಕಿನ ನಗನೂರ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ಕು ಮಕ್ಕಳು ಕೃಷಿಹೊಂಡಕ್ಕೆ ನೀರು ತರಲು ಹೋಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಹಿನ್ನಲೆಯಲ್ಲಿ ಸಚಿವ ಶರಣಬಸಪ್ಪ ದರ್ಶಾನಪೂರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತ ಮಕ್ಕಳ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಇದೇ ಸಂದರ್ಭದಲ್ಲಿ ಮೃತ ಮಕ್ಕಳ ಕುಟುಂಬದ ತಂದೆ ತಾಯಿ ಹಾಗೂ ಅಜ್ಜಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಸಚಿವರ ಮುಂದೆ ತಮ್ಮ ರೋದನೆ ತೋಡಿಕೊಂಡರು. ನಂತರ ಸಚಿವ ದರ್ಶಾನಪೂರ ವೈಯಕ್ತಿಕವಾಗಿ 1 ಲಕ್ಷ ಪರಿಹಾರ ನೀಡಿ ಮುಖ್ಯಮಂತ್ರಿ ನಿಧಿಯಲ್ಲಿ ಸರ್ಕಾರದಿಂದ ಅನುದಾನ ಕೊಡಿಸಲಾಗುವುದು ಇದೊಂದು ಆಘಾತಕಾರಿ ಘಟನೆಯಾಗಿದೆ ಜಿಲ್ಲೆಯಲ್ಲಿ ಎಲ್ಲಿಯೂ ಇಂತಹ ಘಟನೆ ಮರುಕಳಿಸಬಾರದು ಪೋಷಕರು ಮುಂಜಾಗ್ರತೆ ವಹಿಸಬೇಕು ಎಂದರು . ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಗ್ರಾಮದ ಮುಖಂಡರು ಇದ್ದರು.
PublicNext
30/03/2026 09:17 pm
LOADING...