ವಿರಾಜಪೇಟೆ: ವಿರಾಜಪೇಟೆ ಪಟ್ಟಣ ಪಂಚಾಯತಿ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ನಂತರ ನಗರ ವ್ಯಾಪ್ತಿಯ ವಾರ್ಡ್ ಸಂಖೆ 9 ರಲ್ಲಿ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರೂ 65ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡಿರುವ 9 ನೂತನ ಕಾಂಕ್ರೀಟ್ ರಸ್ತೆಗಳ ಲೋಕಾರ್ಪಣೆ ಗೊಳಿಸಿದ್ರು. ಸುಭಾಷ್ ನಗರ, ಸಿಲ್ವಾನಗರ ಹಾಗೂ ವಿದ್ಯಾನಗರ ವಾರ್ಡ್ ವ್ಯಾಪ್ತಿಯಲ್ಲಿ ಈ ರಸ್ತೆಗಳು ನಿರ್ಮಾಣಗೊಂಡಿದ್ದು ಟೇಪ್ ಕತ್ತರಿಸಿ ರಸ್ತೆ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಶಾಸಕ ಪೊನ್ನಣ್ಣ ನಾನು ಅಭಿವೃದ್ದಿ ಮಾಡುವ ಉದ್ದೇಶದಿಂದ ನನಗೆ ಮತಹಾಕಿ ಜಯತಂದು ಕೊಟ್ಟಿದ್ದಿರಾ ಅಭಿವೃದ್ಧಿ ಮಾಡುವುದು ನೀವು ನನಗೆ ಕೊಟ್ಟು ಜವಬ್ದಾರಿ ಅದನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದ್ದೇನೆ.
ಇನ್ನೂ ಕೆಲವರು ಕಾಮಗಾರಿ ನಡೆಯುವ ಸಂದರ್ಭದಲ್ಲಿ ಮೊಬೈಲ್ ನಲ್ಲಿ ವಿಡಿಯೋ ತೆಗೆದು ಕಳಪೆಯಾಗಿ ಕಾಮಗಾರಿ ನಡೆಯುತ್ತಿದೆ ಎಂದು ಪುಕ್ಕಟೆ ಪ್ರಚಾರ ಪಡೆಯುತ್ತಾರೆ. ಕಾಮಗಾರಿ ಮುಗಿಯುವ ತನಕ ಕಾಯುವ ಮನಸ್ಥಿತಿ ಕೆಲವು ಜನರಿಗೆ ಇಲ್ಲ..
ಕಳಪೆಯಾಗಿ ಕಾಮಗಾರಿ ಮಾಡಿದರೆ ಯಾವುದೇ ಕಾರಣಕ್ಕೂ ಅವರಿಗೆ ಬಿಲ್ ಪಾವತಿ ಮಾಡದಂತೆ ಸೂಚಿಸಿದ್ದೇನೆ ದಯವಿಟ್ಟು ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿರು ಕೂಡ ಸಹಕಾರ ನೀಡುವಂತೆ ಮನವಿ ಮಾಡಿದರು.
Kshetra Samachara
31/03/2026 07:42 am
LOADING...