ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಜಮೀನಿನ ದಾರಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಈ ಮಾರಾಮಾರಿ ಓರ್ವ ಯುವಕನ ಜೀವವನ್ನು ಬಲಿತೆಗೆದುಕೊಂಡಿದೆ.
ಮೃತ ದುರ್ದೈವಿಯನ್ನು ಪರಮೇಶ ತಂದೆ ಮಲ್ಲಣ್ಣ ಗಿಂಡಿ (27) ಎಂದು ಗುರುತಿಸಲಾಗಿದೆ. ಕುಟುಂಬಗಳ ನಡುವೆ ಜಮೀನಿನ ದಾರಿ ವಿಚಾರವಾಗಿ ಹಿಂದಿನಿಂದಲೂ ವೈಷಮ್ಯವಿತ್ತು ಎನ್ನಲಾಗಿದೆ.
ಈ ವೈಷಮ್ಯವೇ ಮಾರಾಮಾರಿ ರೂಪ ಪಡೆದು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದು, ಪರಮೇಶ ಸಾವಿಗೆ ಕಾರಣವಾಗಿದೆ. ಘಟನೆಯಲ್ಲಿ ಮೃತ ಪರಮೇಶನ ತಮ್ಮನಿಗೂ ಗಂಭೀರ ಗಾಯಗಳಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
PublicNext
31/03/2026 09:48 am
LOADING...