ಧಾರವಾಡ: ಧಾರವಾಡ ತಾಲೂಕಿನ ಹೆಬ್ಬಳ್ಳಿ-ವನಹಳ್ಳಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಚೆನ್ನಮ್ಮನ ಕಿತ್ತೂರು ಸಮೀಪದ ಶಿವನೂರ ಗ್ರಾಮದ ಮುತ್ತು ರೇವತನವರ (19) ಎಂಬಾತನೇ ಮೃತಪಟ್ಟ ಯುವಕ. ಮೃತ ಯುವಕ ತನ್ನ ತಾಯಿಯ ತವರೂರಾದ ಹೆಬ್ಬಳ್ಳಿಯಲ್ಲಿ ಇರುತ್ತಿದ್ದ. ಘಟನೆಯಲ್ಲಿ ನಿರಂಜನ ಸುಳ್ಳದ ಎಂಬ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಲದ ರೆಂಟೆ ಹೊಡೆದುಕೊಂಡು ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ, ಎದುರಿನಿಂದ ವೇಗವಾಗಿ ಕಾರೊಂದು ಬಂದಿದೆ. ಕಾರಿಗೆ ದಾರಿ ಬಿಟ್ಟುಕೊಡುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
31/03/2026 10:20 am
LOADING...