ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್

ತಿರುಪತಿ: ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಇಂದು ವಿಶ್ವಪ್ರಸಿದ್ಧ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸೋಮವಾರ ಸಂಜೆ ತಿರುಮಲ ದೇವಾಲಯದ ಮಹಾದ್ವಾರಕ್ಕೆ ಆಗಮಿಸಿದ ರಾಜ್ಯಪಾಲರನ್ನು ಅರ್ಚಕರು ಸಾಂಪ್ರದಾಯಿಕ ಗೌರವದೊಂದಿಗೆ ಸ್ವಾಗತಿಸಿದರು.

ಗರ್ಭಗುಡಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ ಬಳಿಕ, ರಂಗನಾಯಕುಲ ಮಂಟಪದಲ್ಲಿ ವೇದ ಪಂಡಿತರು ರಾಜ್ಯಪಾಲರಿಗೆ ವೇದಾಶೀರ್ವಚನ ನೀಡಿದರು. ನಂತರ, ಟಿಟಿಡಿ ಅಧಿಕಾರಿಗಳು ರಾಜ್ಯಪಾಲರಿಗೆ ಶ್ರೀವಾರಿ ಶೇಷವಸ್ತ್ರವನ್ನು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರಿಗೆ ಲಡ್ಡು ಪ್ರಸಾದ ಹಾಗೂ ಸ್ವಾಮಿಯ ಭಾವಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ತಿರುಮಲ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

Edited By :
PublicNext

PublicNext

31/03/2026 04:19 pm

Cinque Terre

14.36 K

Cinque Terre

0

ಸಂಬಂಧಿತ ಸುದ್ದಿ