ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಚಿವ ಕೆ. ಜೆ. ಜಾರ್ಜ್

ಚಿಕ್ಕಮಗಳೂರು: ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ಏಪ್ರಿಲ್ 1 ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 10.30ಕ್ಕೆ ನಗರಕ್ಕೆ ಆಗಮಿಸಲಿರುವ ಅವರು, ದಶಮಾನೋತ್ಸವ ಕ್ರೀಡಾಂಗಣದ ನವೀಕರಣ ಕಾಮಗಾರಿಯ ಭೂಮಿಪೂಜೆಯನ್ನು ನೆರವೇರಿಸಲಿದ್ದಾರೆ. ತದನಂತರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆ.ಡಿ.ಪಿ.) ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಭೆಯ ನಂತರ ಮಧ್ಯಾಹ್ನ 3 ಗಂಟೆಗೆ ಅವರು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

31/03/2026 09:18 pm

Cinque Terre

980

Cinque Terre

0

ಸಂಬಂಧಿತ ಸುದ್ದಿ