ಮುಲ್ಕಿ: ಬಸ್ಸು ನಿಲ್ದಾಣದ ಬಳಿಯ ಭಾಗ್ಯಲಕ್ಷ್ಮೀ ಸಿಲ್ಕ್ ಮಳಿಗೆ ಬಳಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸವಾರರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಾಳು ಸವಾರರನ್ನು ನುಮನ್ ಅಹಮ್ಮದ್ ಮತ್ತು ಸಹದೇವ ಎಂದು ಗುರುತಿಸಲಾಗಿದೆ. ಗಾಯಾಳು ನುಮನ್ ಅಹಮ್ಮದ್ ಎಂಬವರು ತಮ್ಮ ದ್ವಿಚಕ್ರ ವಾಹನದಲ್ಲಿ ತನ್ನ ಸ್ನೇಹಿತ ಅಜಯ್ ರನ್ನು ಕುಳ್ಳಿರಿಸಿಕೊಂಡು ಮುಲ್ಕಿ ವಿಜಯ ಸನ್ನಿದಿ ಕಡೆಯಿಂದ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದಾಗ ಮುಲ್ಕಿ ಕಡೆಯಿಂದ ಬರುತ್ತಿದ್ದ ಸ್ಕೂಟರ್ ಸವಾರ ಸಹದೇವ ಎಂಬವರು ನಿರ್ಲಕ್ಷತನದ ಚಾಲನೆಯಿಂದ ಬಂದು ಡಿಕ್ಕಿ ಹೊಡೆದಿದ್ದಾರೆ.
ಅಪಘಾತದಿಂದ ದ್ವಿಚಕ್ರ ವಾಹನದ ಸವಾರರು ವಾಹನಗಳ ಸಮೇತ ರಸ್ತೆಗೆ ಬಿದ್ದು ದ್ವಿಚಕ್ರ ಸವಾರ ನುಮನ್ ಅಹಮ್ಮದ್ ಗಂಭೀರ ಗಾಯಗೊಂಡಿದ್ದು ಮುಲ್ಕಿ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಕೊಂಡು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಎ ಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಕೂಟರ್ ಸವಾರ ಸಹದೇವ ಅಲ್ಪಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ
ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
01/04/2026 07:20 am
LOADING...