ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮದುವೆಯಾಗಲಿಲ್ಲವೆಂದು ತಾಯಿಯ ತಲೆಗೆ ಕಲ್ಲು ಎತ್ತಿಹಾಕಿದ ಮಗ : ಚನ್ನರಾಯಪಟ್ಟಣದಲ್ಲಿ ಘೋರ ಕೃತ್ಯ

ಚನ್ನರಾಯಪಟ್ಟಣ: ತನಗೆ 40 ವರ್ಷವಾದರೂ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಮಗನೇ ಹೆತ್ತ ತಾಯಿಯ ತಲೆಗೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿರುವ ಭೀಕರ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡಿರುವ ಗಂಗಮ್ಮ (65) ಅವರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಗ ಉಮಾಶಂಕರ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಉಮಾಶಂಕರ್ ಕಳೆದ ವರ್ಷ ಸಂಭವಿಸಿದ ಅಪಘಾತವೊಂದರಲ್ಲಿ ತಲೆಗೆ ಬಲವಾದ ಪೆಟ್ಟು ಮಾಡಿಕೊಂಡಿದ್ದ. ಕಳೆದ 10 ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಈತ, ಸರಿಯಾಗಿ ಔಷಧಿ ಸೇವಿಸದ ಕಾರಣ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದ ಎನ್ನಲಾಗಿದೆ.ನನಗೆ ಮದುವೆ ಮಾಡಿ" ಎಂದು ಮನೆಯವರನ್ನು ಪೀಡಿಸುತ್ತಿದ್ದ ಈತನಿಗೆ, ಅನಾರೋಗ್ಯದ ಕಾರಣದಿಂದಾಗಿ ಯಾರೂ ಹೆಣ್ಣು ಕೊಡಲು ಮುಂದಾಗಿರಲಿಲ್ಲ.

ಜಮೀನಿನಲ್ಲಿ ತಾಯಿಯೊಂದಿಗೆ ಮದುವೆ ವಿಚಾರವಾಗಿ ಗಲಾಟೆ ಮಾಡಿಕೊಂಡ ಉಮಾಶಂಕರ್, ವಿಕೋಪಕ್ಕೆ ಹೋಗಿ ತಾಯಿಯನ್ನು ತಳ್ಳಿ, ಬಿದ್ದಿದ್ದ ಅವರ ತಲೆಗೆ ಕಲ್ಲು ಎತ್ತಿಹಾಕಿದ್ದಾನೆ. ತಕ್ಷಣ ಸ್ಥಳೀಯರು ಧಾವಿಸಿ ಗಂಗಮ್ಮ ಅವರನ್ನು ರಕ್ಷಿಸಿ ಹಾಸನದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Edited By : Nirmala Aralikatti
PublicNext

PublicNext

01/04/2026 01:08 pm

Cinque Terre

5.4 K

Cinque Terre

0