ಹುಬ್ಬಳ್ಳಿ: ವಿದ್ಯುತ್ ತಂತಿಯೊಂದು ಮರಕ್ಕೆ ತಗಲಿದ ಪರಿಣಾಮ ಮರಕ್ಕೆ ಬೆಂಕಿ ಹತ್ತಿಕೊಂಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಹಳೆಯ ಇನ್ಕಮ್ ಟ್ಯಾಕ್ಸ್ ಆಫೀಸ್ ಬಳಿಯಲ್ಲಿ ನಡೆದಿದೆ.
ವಿದ್ಯುತ್ ಕೇಬಲ್‌ಗೆ ಮರದ ಕೊಂಬೆಯೊಂದು ತಗುಲಿದ್ದು, ಬೆಂಕಿ ಹೊತ್ತಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಅನಾಹುತ ತಪ್ಪಿದಂತಾಗಿದೆ.
Kshetra Samachara
01/04/2026 03:53 pm
LOADING...